ಕೊಟ್ಟಿಗೆಹಾರದಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಕಾರೊಂದು ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಕಂದಕಕ್ಕೆ ಉರುಳಿಗಾಯಗೊಂಡಿದ್ದ ಗಾಯಾಳುಗಳ ಪೈಕಿ ಸರೋಜಿನಿ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾರುಣವಾಗಿ ಮೃತಪಟ್ಟಿದ್ದಾರೆ.ಉಜಿರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ಹಾಗೂ ಕುಟುಂಬಸ್ಥರು ಶೃಂಗೇರಿಯ ಕೊಪ್ಪ ಎಂಬಲ್ಲಿ ಮರಣದ ಕಾರ್ಯಕ್ರಮಕ್ಕೆ ಹೋಗಿ ಮರಳುತ್ತಿದ್ದ ವೇಳೆ ರವಿವಾರ ರಾತ್ರಿ ಈ ಅವಘಡ ನಡೆದಿತ್ತು. ಕಾರಿನಲ್ಲಿ ಪ್ರಯಣಿಸುತ್ತಿದ್ದ ಪುಷ್ಪಾವತಿ ಆರ್.ಶೆಟ್ಟಿ, ಪುತ್ರಿ ಪೂರ್ಣಿಮಾ ಶೆಟ್ಟಿ, ಮೊಮ್ಮಗ ಸಮೃದ್ಧ್, ಸಾಕ್ಷಿ, ಸಂಬಂಧಿಕ ಮಹಿಳೆ […]Read More
Tags :Belthngady
ಬೆಳ್ತಂಗಡಿ: ಕಾಶಿಬೆಟ್ಟು ಎಂಬಲ್ಲಿ ದ್ವಿಚಕ್ರ ವಾಹನ ಮತ್ತು ಗೂಡ್ಸ್ ವಾಹನ ನಡುವೆ ಅಪಘಾತ ಸಂಭವಿಸಿದ್ದು ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿರುವ ಘಟನೆ ಡಿ.25 ರಂದು ಸಂಜೆ ವೇಳೆ ನಡೆದಿದೆ. ಚಿಕ್ಕಮಗಳೂರು ಕಡೆಗೆ ಹೋಗುತ್ತಿದ್ದ ವಾಹನ ಉಜಿರೆಯಿಂದ ಬೆಳ್ತಂಗಡಿ ಗೆ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ದ್ವಿಚಕ್ರ ವಾಹನ ಸವಾರ ಚಾರ್ಮಾಡಿ ಗ್ರಾಮದ ಪುರುಷೋತ್ತಮ ಪೂಜಾರಿ(20) ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.ಶವವನ್ನು ಬೆಳ್ತಂಗಡಿ ಶವಾಗಾರದಲ್ಲಿ […]Read More