ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಉಜಿರೆಯಲ್ಲಿ ಪದವಿ ಶಿಕ್ಷಣವನ್ನು ಪಡೆದಿರುವ ರಕ್ಷಿತಾ ಎಂ ಬಿ ಇವರು ಭಾರತೀಯ ಸೇನೆಯ ಪ್ಯಾರಾ ಮಿಲಿಟರಿ ಫೋರ್ಸ್ SSCGD ಅಸ್ಸಾಂ ರೈಫಲ್ಸ್ ಗೆ ಆಯ್ಕೆಯಾಗಿದ್ದಾರೆ. ಇವರು ಮೂಲತಃ ಸುಳ್ಯ ತಾಲೂಕಿನ ಐವರ್ನಾಡಿಯವರಾಗಿದ್ದು ಪ್ರಸ್ತುತ ಧರ್ಮಸ್ಥಳದ ಪಾಂಗಾಳದಲ್ಲಿ ವಾಸವಿದ್ದಾರೆ. ಈಕೆ ಭಾಸ್ಕರ ಮಡ್ತಿಲ ಮತ್ತು ಮಮತಾ ದಂಪತಿಗಳ ಸುಪುತ್ರಿ. ಇವರಿಗೆ ಶಾಸಕರಾದ ಹರೀಶ್ ಪೂಂಜರವರು ಶಾಲು ಹೊದಿಸಿ ಗೌರವವನ್ನು ಸಲ್ಲಿಸಿದ್ದಾರೆ.Read More
Tags :Bharathiya
ಭಾರತೀಯ ಸೇನೆಯ ಅಗ್ನಿಪಥ ಯೋಜನೆಗೆ ಅಗ್ನಿವೀರರಾಗಿ ಆಯ್ಕೆಯಾದ ಬೆಳ್ತಂಗಡಿ ತಾಲೂಕಿನ 4 ಜನ
ಬೆಳ್ತಂಗಡಿ: ಭಾರತೀಯ ಸೇನೆಗೆ ಅಗ್ನಿವೀರ್ ನೇಮಕಾತಿಯಲ್ಲಿ ಬೆಳ್ತಂಗಡಿ ತಾಲೂಕಿನಿಂದ ಅಗ್ನಿವೀರರಾಗಿ ನಾಲ್ಕು ಜನ ಆಯ್ಕೆಗೊಂಡಿರುವುದು ಶ್ಲಾಘನೀಯ. ಭಾರತೀಯ ಭೂ ಸೇನೆ ತಾಂತ್ರಿ ವಿಭಾಗಕ್ಕೆ ಬೆಳ್ತಂಗಡಿ ತಾಲೂಕಿನ ಧನುಷ್ ಗೌಡ, ಭಾರತೀಯ ನೌಕಾ ಸೇನೆಗೆ ಸೂರಜ್ ಶೆಟ್ಟಿ, ಭಾರತೀಯ ಭೂ ಸೇನೆಗೆ ರಜನೀಶ್ ಹಾಗೂ ವಿಜೇತ್ ಆಯ್ಕೆಗೊಂಡಿದ್ದಾರೆ. ಇವರಿಗೆ ಬೆಳ್ತಂಗಡಿ ತಾಲೂಕಿನ ಜನತೆಯ ಪರವಾಗಿ ಬೆಳ್ತಂಗಡಿ ಶಾಸಕರು ಹರೀಶ್ ಪೂಂಜ ಅಭಿನಂದನೆಯನ್ನು ತಿಳಿಸಿದ್ದಾರೆ.Read More
ಬೆಳ್ತಂಗಡಿ: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದಿಂದ ವಿಶೇಷ ಕಾರ್ಯಕಾರಿಣಿ ಸಭೆಯು ಅ29ರಂದು ಬೆಳ್ತಂಗಡಿ ಮಂಜುನಾಥೇಶ್ವರ ಕಲಾಭವನದಲ್ಲಿ ಜರುಗಿತು. ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿದರು. ಬೆಳ್ತಂಗಡಿ ಬಿಜೆಪಿ ಮಂಡಲದ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಬೆಳ್ತಂಗಡಿ ಮಂಡಲ ಪ್ರಭಾರಿ ಹರಿಕೃಷ್ಣ ಬಂಟ್ವಾಳ, ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ತಾಲೂಕಿನ ಎಲ್ಲಾ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ […]Read More
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ದೀಪಾವಳಿ ದೋಸೆ ಹಬ್ಬ ಅ.24 ರಂದು ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಜರುಗಿತು.ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ದೀಪಾವಳಿ ದೋಸೆ ಹಬ್ಬ ಅ.24 ರಂದು ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಜರುಗಿತು. ಇಂಧನ ಸಚಿವ ಸುನಿಲ್ ಕುಮಾರ್ ದೋಸೆ ಹಬ್ಬಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಾಸಕ […]Read More
ಧಾರವಾಡ: ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯನ್ನು ಹಾಗೂ ನೂತನ ಕ್ಯಾಂಪಸ್ ಅನ್ನು ಉದ್ಘಾಟಿಸಿದ
ಧಾರವಾಡ: ಧಾರವಾಡದಲ್ಲಿ ನಿರ್ಮಾಣಗೊಂಡಿರುವ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯನ್ನು (ಐಐಐಟಿ) ಹಾಗೂ ನೂತನ ಕ್ಯಾಂಪಸ್ ಅನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟಿಸಿದರು. ಸಂಸ್ಥೆಯ ಅಧ್ಯಕ್ಷೆ ಹಾಗೂ ಇನ್ಪೊಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾ ಮೂರ್ತಿ ರಾಷ್ಟಪತಿ ಅವರನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರಚಂದ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಇದ್ದರು. ಐಐಐಟಿ ಉದ್ಘಾಟನೆ ಮಾಡಿದ ರಾಷ್ಟ್ರಪತಿ ಮುರ್ಮು ಅವರಿಗೆ ಸುಧಾ ಮೂರ್ತಿಯವರು […]Read More