ನಿಟ್ಟೆ: ಇಲ್ಲಿಯ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ವರ್ಷದ ಬಿಎಸ್ಸಿ ವಿದ್ಯಾರ್ಥಿ ಜನಿತ್ ಶೆಟ್ಟಿ ಎಂಬ ವಿದ್ಯಾರ್ಥಿ 21 ರಂದು ಬುಧವಾರ ಬಸ್ ನಿಂದ ಬಿದ್ದು ಸಾವನ್ನಪ್ಪಿದ್ದು, ಬಸ್ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಟ್ಟೆ ಕಾರ್ಕಳ ವತಿಯಿಂದ ನಿಟ್ಟೆ ಕಾಲೇಜು ವಿದ್ಯಾರ್ಥಿಗಳಿಂದ ಕಾಲೇಜು ಮುಂಭಾಗ ಪ್ರತಿಭಟನೆ ನಡೆಯಿತು. ಬಸ್ಸಿನ ಕೊರತೆಯಿಂದಾಗಿ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಬಸ್ ಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ವಿದ್ಯಾರ್ಥಿಗಳು ಹರಸಾಹಸದಲ್ಲಿ ಬಸ್ ಹತ್ತುತ್ತಿದ್ದ ಪರಿಣಾಮ ವಿದ್ಯಾರ್ಥಿಯ ಜೀವವೇ ಬಲಿಯಾಗಿದೆ. ಬಸ್ ಗಳ […]Read More
Tags :Bus
ಬೆಳ್ತಂಗಡಿ:ಜೂ.28: ಸಾರ್ವಜನಿಕರು, ಶಾಲಾ ವಿದ್ಯಾರ್ಥಿಗಳು ದೈನಂದಿನ ಚಟುವಟಿಕೆಗಳಲ್ಲಿ ಪ್ರಸಕ್ತ ಎದುರಿಸುತ್ತಿರುವ ಬಸ್ ಸಮಸ್ಯೆಗಳನ್ನು ನಿವಾರಿಸಿ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಲು ಜುಲೈ 1 ರಂದು ಸೋಮವಾರ ಅಪರಾಹ್ನ 2.30ಕ್ಕೆ ಬೆಳ್ತಂಗಡಿ ಸಂತೆಕಟ್ಟೆ ಶ್ರೀ ಮಂಜುನಾಥ ಸಭಾಭವನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವಿಭಾಗದ ಅಧಿಕಾರಿಗಳ ಸಮ್ಮುಖದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅದಾಲತ್ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರು ವಿದ್ಯಾರ್ಥಿಗಳು ತಮ್ಮ ಅಹವಾಲು ಸಲ್ಲಿಸಿ ಪರಿಹಾರ ಕಂಡುಕೊಳ್ಳಬೇಕೆಂದು ಬೆಳ್ತಂಗಡಿ ಶಾಸಕರ ಕಚೇರಿ ಶ್ರಮಿಕದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.Read More
ಚಾರ್ಮಾಡಿ ಭಾಗದ ಜನರಿಗೆ ಬಸ್ ಸಂಚಾರದ ಕೊರತೆ: ಪರದಾಡುತ್ತಿರುವ ವಿದ್ಯಾರ್ಥಿಗಳು, ಸಾರ್ವಜನಿಕರು: ಸಮಸ್ಯೆ
ಚಾರ್ಮಾಡಿ ಭಾಗದ ಜನರಿಗೆ ಸರಿಯಾದ ಸಮಯಕ್ಕೆ ಕೆಎಸ್ ಆರ್ ಟಿಸಿ ಬಸ್ ಸಂಚಾರದ ಕೊರತೆಯಿದ್ದು, ವಿದ್ಯಾರ್ಥಿಗಳು, ಸಾರ್ವಜನಿಕರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಇದರಿಂದ ವಿದ್ಯಾರ್ಥಿಗಳು, ಸಾರ್ವಜನಿಕರು ಸರಿಯಾದ ಸಮಯಕ್ಕೆ ಶಾಲಾ ಕಾಲೇಜುಗಳಿಗೆ, ಕಚೇರಿಗಳಿಗೆ ತಲುಪಲು ಆಗುತ್ತಿಲ್ಲ. ಇದರಿಂದ ಬೇಸತ್ತ ಸಾರ್ವಜನಿಕರು, ವಿದ್ಯಾರ್ಥಿಗಳು ಇಂದು( ಜ.2) ರಂದು ಸೋಮಂತಡ್ಕದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಲಾಯಿತು. ಚಾರ್ಮಾಡಿ, ದಿಡುಪೆ ,ಕಾಯರ್ತಡ್ಕ ಭಾಗಗಳಲ್ಲಿ ಸ್ಥಳೀಯರಿಗೆ ಸಾರಿಗೆ ವಾಹನ ಟ್ರಿಪ್ ಕ್ಯಾನ್ಸಲ್ ಮಾಡುತ್ತಿರುವುದು ಕೆಎಸ್ ಆರ್ ಟಿಸಿ ಇಲಾಖೆಗೆ ಪ್ರತಿಭಟನೆಯ […]Read More
ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೋನಾ ಉಲ್ಬಣವಾಗುತ್ತಿದ್ದು, ಕೊರೋನಾ ನಾಲ್ಕನೇ ಅಲೆ ಭೀತಿ ಹಿನ್ನೆಲೆ ಬಿಎಂಟಿಸಿ ಹಾಗೂ ಮೆಟ್ರೋ ದಲ್ಲಿ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಈ ಮಹತ್ವದ ನಿರ್ಧಾರ ಇಂದಿನಿಂದ ( ಡಿಸೆಂಬರ್ 24) ಆರಂಭವಾಗಿದ್ದು, ಆರೋಗ್ಯ ಇಲಾಖೆ ನಿರ್ದೇಶನದಂತೆ ಈ ಕುರಿತು ಬಿಎಂಟಿಸಿ ಸುತ್ತೋಲೆ ಹೊರಡಿಸಿದ್ದು, ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಒಂದು ವೇಳೆ ಮಾಸ್ಕ್ ಧರಿಸದಿದ್ದರೆ ಬಸ್ ಹತ್ತುವಂತಿಲ್ಲ. ಬಿಎಂಟಿಸಿ ಬಸ್ ಸಿಬ್ಬಂದಿಗಳಿಗೂ ಮಾಸ್ಕ್ ಕಡ್ಡಾಯ […]Read More
ನಿಡ್ಲೆ : ನಿಡ್ಲೆ ಗ್ರಾಮದ ಕುದ್ರಾಯ ಎಂಬಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು ಇದರಲ್ಲಿ ಓರ್ವ ಸಾವನ್ನಪ್ಪಿದ್ದು ,ಏಳು ಜನರಿಗೆ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳದ ಕುದ್ರಾಯದಲ್ಲಿ ನ.23 ರಂದು ಸಂಜೆ ನಡೆದಿದೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸುತ್ತಿದ್ದ ಮಂಡ್ಯ ಜಿಲ್ಲೆಯ ಹತ್ತು ಮಂದಿಯ ಕುಟುಂಬ ನಿಡ್ಲೆ ಗ್ರಾಮದ ಕುದ್ರಾಯ ಎಂಬಲ್ಲಿ ಬೊಲೇರೋ ವಾಹನವನ್ನು ರಸ್ತೆಯ ಬಲಕ್ಕೆ ಪಾರ್ಕ್ ಮಾಡಿ ನಿಲ್ಲಿಸಿ ಇಳಿದು ಅಂಗಡಿ ಹೋಗುತ್ತಿದ್ದರು ಈ ವೇಳೆ ಧರ್ಮಸ್ಥಳ ಡಿಪೋದಿಂದ ಮೈಸೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ […]Read More
ಕುದ್ರಾಯ: ಧರ್ಮಸ್ಥಳದಿಂದ ಮಿಯಾರ್ ಗೆ ತೆರಳುವ ಬಸ್ ಸಂಜೆ 5:30 ಸುಮಾರಿಗೆ ಕುದ್ರಾಯ ಎಂಬಲ್ಲಿ ಕೆಟ್ಟು ನಿಂತು ಇಂದು ವಿದ್ಯಾರ್ಥಿಗಳು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಸಮಯಕ್ಕೆ ಸರಿಯಾಗಿ ಬದಲಿ ಬಸ್ ನೀಡಿದ್ದರು ಸಹ ವಿದ್ಯಾರ್ಥಿಗಳಿಗೆ ಅಡಚಣೆಯುಂಟಾಗಿದೆ. ಈ ಮೊದಲು ಹಲವಾರು ಭಾರೀ ಇದೇ ಸಮಸ್ಯೆಗಳಾಗಿದ್ದು ಬರೆಂಗಾಯ ಕಾರ್ಯಾತಡ್ಕ ಹಾಗೂ ಮಿಯಾರ್ ಗೆ ತೆರಳುವ ಪ್ರಯಾಣಿಕರಿಗೆ ಅಸಮಾಧಾನ ಉಂಟಾಗಿದೆ. ಅತೀ ಹೆಚ್ಚು ಪ್ರಯಾಣಿಕರನ್ನು ತುಂಬಿಸಿಕೊಂಡು ಬರುವ ಈ ಬಸ್ಸಲ್ಲಿ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿರುತ್ತಾರೆ. ಆದ್ದರಿಂದ ಪ್ರಯಾಣಿಕರಿಗೆ ತೊಂದರೆಯಾಗದ […]Read More
ಪುತ್ತೂರು: ವಿದ್ಯಾರ್ಥಿಯೊಬ್ಬ ಬಸ್ಸಿನಲ್ಲಿ ರೈಟ್ ಪೋಯಿ ಎಂದು ಹೇಳಿದ ಕಾರಣ ನಿರ್ವಾಹಕನನ್ನು ನಿಲ್ದಾಣದಲ್ಲಿಯೇ ಬಿಟ್ಟು ಚಾಲಕ ಬಸ್ ಚಲಾಯಿಸಿಕೊಂಡು ಹೋದ ಘಟನೆ ಪುತ್ತೂರಿನಲ್ಲಿ ನ.3ರಂದು ಬೆಳಗ್ಗೆ ನಡೆದಿದೆ. ಪುತ್ತೂರಿನಿಂದ ಮಂಗಳೂರಿಗೆ ಹೋಗುವ ಕೆಎಸ್ಆರ್ ಟಿಸಿ ಬಸ್ಸಿನ ಚಾಲಕ ನಿರ್ವಾಹಕನನ್ನು ಪುತ್ತೂರು ಬಸ್ ನಿಲ್ದಾಣದಲ್ಲಿ ಬಿಟ್ಟು ಬಂದಿದ್ದರು. ನಿಲ್ದಾಣದಿಂದ ಬಸ್ ಹೊರಡುವ ವೇಳೆ ವಿದ್ಯಾರ್ಥಿಯೋರ್ವ ರೈಟ್ ಪೋಯಿ ಎಂದು ಹೇಳಿದ್ದಾನೆ. ನಿರ್ವಾಹಕಣೆ ರೈಟ್ ಪೋಯ್ ಎಂದು ಹೇಳಿದ್ದಾಗಿ ಭಾವಿಸಿದ ಚಾಲಕ ಬಸ್ ಚಲಾಯಿಸಿದ್ದಾರೆ ಪುತ್ತೂರು ನಿಲ್ದಾಣದಿಂದ ಹೊರಟ […]Read More
ಬೆಂಗಳೂರು/ಮಂಗಳೂರು, ಅ. 11: ಪ್ಯಾಕೇಜ್ ಟೂರ್‌ಗಳಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ವಿಭಾಗದ ಕೆಎಸ್‌ಆರ್‌ಟಿಸಿಯಿಂದ ಸದ್ಯದ ಮಟ್ಟಿಗೆ 5-10 ಬಸ್ಸುಗಳನ್ನು ಬಿಡಲಾಗುತ್ತಿದೆ. ವೀಕೆಂಡ್‌ಗಳಲ್ಲಿ ದಕ್ಷಿಣ ಕನ್ನಡದ ಪ್ರಮುಖ ದೇವಸ್ಥಾನಗಳ ದರ್ಶನವಾಗುವಂತೆ ಪ್ಯಾಕೇಜ್ ಟೂರ್‌ಗಳನ್ನು ರೂಪಿಸಲಾಗಿದೆ.ಕೆಎಸ್‌ಆರ್‌ಟಿಸಿ ಅಧ್ಯಕ್ಷ ಎಂ ಚಂದ್ರಪ್ಪ ಈ ವಿಚಾರವನ್ನು ಮಾಧ್ಯಮಗಳಿಗೆ ತಿಳಿಸಿದರು. ದಸರಾ ಸಂದರ್ಭದಲ್ಲೂ ಕೆಎಸ್‌ಆರ್‌ಟಿಸಿ ಪ್ಯಾಕೇಜ್ ಟೂರ್ ಆಯೋಜಿಸಿತ್ತು. ತಕ್ಕಮಟ್ಟಿಗೆ ಯಶಸ್ವಿಯೂ ಆಗಿತ್ತು. ಈ ಹಿನ್ನೆಲೆಯಲ್ಲಿ ದೀಪಾವಳಿಗೂ ಪ್ಯಾಕೇಜ್ ಟೂರ್ ಹಾಕಲು ಕೆಎಸ್‌ಆರ್‌ಟಿಸಿ ನಿರ್ಧರಿಸಿದೆ. ಸದ್ಯಕ್ಕೆ 5-10 ಬಸ್ಸುಗಳನ್ನು ವೀಕೆಂಡ್ ಪ್ರವಾಸ […]Read More
ಹಿರಿಯಡ್ಕ: ಕಾರ್ಕಳ ಉಡುಪಿ ರಸ್ತೆಯ ಹಿರಿಯಡ್ಕ ಬಳಿ ಬೈಲೂರು ಎಂಬಲ್ಲಿ ಧರ್ಮಸ್ಥಳದಿಂದ ಬೆಳಗಾಂ ಗೆ ಹೋಗುವ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೆ.28 ರಂದು ನಡೆದಿದೆ. ಬೈಕ್ ಸವಾರ ರಾಂಗ್ ಸೈಡಿಂದ ಬಂದ ಪರಿಣಾಮ ಸವಾರನ ನಿಯಂತ್ರಣ ತಪ್ಪಿ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಬಸ್ ಜಖಂ ಗೊಂಡಿದ್ದು ಚಾಲಕ ಹಾಗೂ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಬಸ್ಸಲ್ಲಿದ್ದ ಪ್ರಯಾಣಿಕರನ್ನು ಬೇರೊಂದು ಬಸ್ಸಿಗೆ ಕಳುಹಿಸಿದ್ದಾರೆ.Read More
ಪುತ್ತೂರು: ಚಲಿಸುತ್ತಿದ್ದ ಬಸ್ಸಿನಲ್ಲಿ ಹೊಗೆ ಕಾಣಿಸಿಕೊಂಡಿದ್ದು ಚಾಲಕನ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದ ಘಟನೆ ಪುತ್ತೂರು ಮುಖ್ಯ ರಸ್ತೆ ಯಲ್ಲಿ ಇಂದು ನಡೆದಿದೆ. ಪುತ್ತೂರು ಬಸ್ ನಿಲ್ದಾಣದಿಂದ ಧರ್ಮಸ್ಥಳದ ಕಡೆಗೆ ಹೊರಟ್ಟಿದ್ದ ಬಸ್ ಹಳೇ ಮಯೂರ ಥಿಯೇಟರ್ ಬಳಿ ತಲುಪಿದಾಗ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಇದನ್ನು ಗಮನಿಸಿದ ಬಸ್ ಚಾಲಕ ಬಸ್ ಅನ್ನು ಮಾರ್ಗ ಮಧ್ಯದಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿದ್ದಾರೆ.Read More