ಕನ್ಯಾಡಿ ಚಾತುರ್ಮಾಸ್ಯ ವೃತಾಚರಣೆಯಲ್ಲಿ ಪಾದುಕ ಪೂಜೆ ನೆರವೇರಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್
ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಗುರು ದೇವ ಮಠದಲ್ಲಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ 45ನೇ ಚಾತುರ್ಮಾಸ್ಯ ವ್ರತಾಚರಣೆಯಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯಕ್ ಉಳಿಪ್ಪಾಡಿಯವರು ಗುರುಗಳ ಪಾದುಕ ಪೂಜೆ ನೆರವೇರಿಸಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಕಿಯೋನಿಕ್ಸ್ ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್, ಬಿಜೆಪಿ ಬಂಟ್ವಾಳ ಮಂಡಲ ಪ್ರ. ಕಾರ್ಯದರ್ಶಿ ಡೊಂಬಯ್ಯ ಅರಳ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ, ಪ್ರಣಾಮ್ ರಾಜ್ ಅಜ್ಜಿಬೆಟ್ಟು ಉಪಸ್ಥಿತರಿದ್ದರು.Read More