ಭೌಮಾಸುರ ಅಥವಾ ನರಕಾಸುರನೆಂಬ ಒಬ್ಬ ಬಲಾಢ್ಯ ರಾಕ್ಷಸನು ರಾಜ್ಯವನ್ನಾಳುತ್ತಿದ್ದನು. ಅವನು ದೇವತೆಗಳಿಗೆ ಮತ್ತು ಮಾನವರಿಗೆ ಬಹಳ ತೊಂದರೆ ಗಳನ್ನು ಕೊಡತೊಡಗಿದನು. ಈ ದುಷ್ಟದೈತ್ಯನು ಸ್ತ್ರೀಯರನ್ನು ಪೀಡಿಸತೊಡಗಿದನು. ಅವನು ತಾನು ಜಯಿಸಿ ತಂದಿದ್ದ 16೦೦೦ ವಿವಾಹಯೋಗ್ಯ ರಾಜಕನ್ಯೆಯರನ್ನು ಸೆರೆವಾಸದಲ್ಲಿಟ್ಟು ಅವರೊಂದಿಗೆ ವಿವಾಹವಾಗುವ ಹುನ್ನಾರವನ್ನು (ಯುಕ್ತಿಯನ್ನು) ಮಾಡಿದ್ದನು. ಇದರಿಂದ ಎಲ್ಲ ಕಡೆಗಳಲ್ಲಿಯೂ ಹಾಹಾಕಾರವೆದ್ದಿತು. ಶ್ರೀಕೃಷ್ಣನಿಗೆ ಈ ವೃತ್ತಾಂತವು ತಿಳಿದ ಕೂಡಲೇ ಅವನು ಸತ್ಯಭಾಮೆಯೊಂದಿಗೆ ಬಂದು ನರಕಾಸುರನೊಂದಿಗೆ ಯುದ್ಧವನ್ನು ಮಾಡಿ ನರಕಾಸುರನನ್ನು ವಧಿಸಿದನು ಮತ್ತು ಆ ರಾಜಕನ್ಯೆಯರನ್ನು ಮುಕ್ತಗೊಳಿಸಿದನು. ಸಾಯುವಾಗ […]Read More