ಜರ್ಮನಿಯ ಬರ್ಲಿನ್ ನಲ್ಲಿ ನಡೆದ ವಲ್ಡ್ ರೈಲ್ವೇಸ್ ವಾಲಿಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತೀಯ ರೈಲ್ವೇಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಭಾರತೀಯ ತಂಡದಲ್ಲಿ ಕಾರ್ಕಳ ತಾಲೂಕಿನ ಬೈಲೂರು ಗ್ರಾಮದ ಸುಧೀರ್ ಶೆಟ್ಟಿ ಹಾಗೂ ಬೆಳ್ತಂಗಡಿ ತಾಲೂಕಿನ ಅಶ್ವಲ್ ರೈ ತಂಡದಲ್ಲಿ ಆಟಗಾರರಾಗಿ ಭಾಗಿಯಾಗಿದ್ದು ವಾಲಿಬಾಲ್ ಚಾಂಪಿಯನ್ ಶಿಪ್ ನಲ್ಲಿ ವಿಶ್ವದ ಎಂಟು ರೈಲ್ವೇಸ್ ತಂಡಗಳು ಭಾಗಿಯಾಗಿದ್ದವು. ಫೈನಲ್ ಪಂದ್ಯದಲ್ಲಿ ಭಾರತ ತಂಡವು ಅತಿಥೇಯ ಜರ್ಮನಿ ತಂಡವನ್ನು ಮಣಿಸಿ ಚಾಂಪಿಯನ್ ಪಟ್ಟವನ್ನು ಗೆದ್ದುಕೊಂಡಿದೆRead More