ಬೆಳ್ತಂಗಡಿ: ರಾಜೀವ ಗಾಂಧಿ ವಸತಿ ನಿಗಮ ಬೆಂಗಳೂರು, ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ 2021- 22ನೇ ಸಾಲಿನ ಬಸವ ವಸತಿ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ವಸತಿ ಯೋಜನೆಯಲ್ಲಿ 48 ಗ್ರಾಮ ಪಂಚಾಯತ್ ಗಳು 1640 ಮಂದಿ ಅಹ೯ ಫಲಾನುಭವಿಗಳಿಗೆ ಮನೆ ನಿರ್ಮಾಣ ಕಾಮಗಾರಿ ಆದೇಶ ಪತ್ರ ವಿತರಣಾ ಕಾರ್ಯಕ್ರಮ ಆ.27ರಂದು ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನ ಗುರುವಾಯನಕೆರೆಯಲ್ಲಿ ಜರುಗಿತು. ರಾಜ್ಯ ಸರ್ಕಾರದ ವಸತಿ […]Read More
Tags :Poonja
ಮೈರೋಳ್ತಡ್ಕ: ಹರೀಶ್ ಪೂಂಜರ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳಿಂದ ಮುಂಡೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ
ಮೈರೋಳ್ತಡ್ಕ: ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಮೈರೋಳ್ತಡ್ಕ ದ ಮುಂಡೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಶಾಸಕರಾದ ಹರೀಶ್ ಪೂಂಜರವರ ಜನುಮ ದಿನದ ಪ್ರಯುಕ್ತ ದೇವಸ್ಥಾನ ದ ಪರವಾಗಿ ಹಾಗೂ ಬಂದಾರು ಗ್ರಾಮದ ಅಭಿಮಾನಿಗಳ ಪರವಾಗಿ ಶಾಸಕರಿಗೆ ಆರೋಗ್ಯ,ದೀರ್ಘಾಯುಷ್ಯ,ಉತ್ತಮ ಉಜ್ವಲ ಭವಿಷ್ಯ ಸಿಗಲೆಂದು ಪ್ರಾರ್ಥಿಸಲಾಯಿತು.ವಿಶೇಷ ಪುಷ್ಪಾರ್ಚನೆ ಸೇವೆ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಸಕರ ಅಭಿಮಾನಿ ಬಳಗ ಭಾಗಿಯಾಗಿದ್ದರು.Read More
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾರವರ ಹುಟ್ಟು ಹಬ್ಬದ ಪ್ರಯುಕ್ತ ಕೆ.ಎಂ.ಸಿ ಹಾಸ್ಪಿಟಲ್ ಸಹಯೋಗದಿಂದ ಬೆಳ್ತಂಗಡಿ ಹರೀಶ್ ಪೂಂಜಾ ಅಭಿಮಾನಿಗಳಿಂದ ಶಾಸಕ ಹರೀಶ್ ಪೂಂಜಾ ಹುಟ್ಟು ಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಮತ್ತು ಅಂಗಾಂಗ ದಾನ ಷೋಷಣೆ ಕಾರ್ಯಕ್ರಮ ಆಗಸ್ಟ್.17 ರಂದು ಬೆಳ್ತಂಗಡಿ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಪಟ್ಟಣ ಪಂಚಾಯತ್ ಉಪಾಧ್ಯಕ್ಷ ಜಯಾನಂದ ಗೌಡ ಉದ್ಘಾಟಿಸಿದರು. ಈ ವೇಳೆ ಮೊಗ್ರು ಗ್ರಾಮದ 4 ಜನ ರಕ್ತದಾನ ಮಾಡಿರುವ ಹಾಗೂ ಒಬ್ಬರು ಅಂಗಾಂಗ ದಾನ […]Read More
ಉಜಿರೆ: ಉಜಿರೆ ಶ್ರೀ ಧ. ಮ. ಕಾಲೇಜು (ಸ್ವಾಯತ್ತ )ವತಿಯಿಂದ ಆ.10 ರಂದು ಉಜಿರೆ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜಿನ ಮಾತೃ ಶ್ರೀ ರತ್ನಮ್ಮ ಹೆಗ್ಗಡೆ ಸಭಾಂಗಣದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಶ್ರೀ ಧ. ಮ. ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಡಿ.ಹರ್ಷೇಂದ್ರ ಕುಮಾರ್,ಡಾ. ಸತೀಶ್ಚಂದ್ರ, ಕಾಮನ್ ವೇಲ್ತ್ ಕ್ರೀಕೂಟದಲ್ಲಿ ಪದಕ ವಿಜೇತ ಕಾಲೇಜು ಹಳೆ ವಿದ್ಯಾರ್ಥಿ ಗುರುರಾಜ್ಭಾಗವಹಿಸಿದ್ದರು. […]Read More
ವಿ ಆರ್ ಎಲ್ ಮಾಧ್ಯಮ ಸಮೂಹ ಸಂಸ್ಥೆಯು ಕೊಡಮಾಡುವ ಪ್ರತಿಷ್ಠಿತ ” ವಿಜಯ ರತ್ನ ” ಪ್ರಶಸ್ತಿಗೆ ಭಾಜನರಾದ ಕನಸಿನ ಮನೆ ಮಾಲಕರಾದ ಮೋಹನ್ ಕುಮಾರ್ ಉಜಿರೆ ಅವರನ್ನು ಶಾಸಕ ಹರೀಶ್ ಪೂಂಜ ರವರು ಭೇಟಿ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲಾಧ್ಯಕ್ಷರಾದ ಜಯಂತ್ ಕೋಟ್ಯಾನ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಗೌಡ ಅವರು ಜೊತೆಗಿದ್ದರು.Read More
ಮೈರೋಳ್ತಡ್ಕ: ಬಂದಾರು ಗ್ರಾಮದ ಮೈರೋಳ್ತಡ್ಕ ,ಕುರಾಯ ಚಂದ್ರಹಾಸ ಇವರಿಗೆ ಅಪಘಾತ ಸಂದರ್ಭದಲ್ಲಿ ಅವರ ಕೈ ಮತ್ತು ಕಾಲಿಗೆ ತೀವ್ರವಾದ ಗಾಯವಾಗಿದ್ದು ನಡೆದಾಡಲು ಅಸಾಧ್ಯವಾಗಿರುವುದನ್ನು ಮನಗಂಡು ಶಾಸಕ ಹರೀಶ್ ಪೂಂಜರವರು ವೀಲ್ ಚೆಯರ್ ನ್ನು ವೈಯಕ್ತಿಕವಾಗಿ ನೀಡಿದರು. ಇದನ್ನು ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪರಮೇಶ್ವರಿ ಕೆ.ಗೌಡ ಇವರು ಹಸ್ತಾಂತರಿಸಿದರು.Read More
ಬೆಳ್ತಂಗಡಿ: ದ.ಕ.ಜಿ.ಪ.ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ , ಉಪ ನಿರ್ದೇಶಕರು ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ, ವಾಣಿ ಆಂಗ್ಲಮಾಧ್ಯಮ ಶಾಲೆ ಹಳೇಕೋಟೆ ಬೆಳ್ತಂಗಡಿ ಇದರ ಆಶ್ರಯದಲ್ಲಿ ದ.ಕ.ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ಕರಾಟೆ ಸ್ಪರ್ಧೆ 2022 ಇದರ ಉದ್ಘಾ ಟನೆಯು ಆ.6ರಂದು ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ ಜರಗಿತು. ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು. ಬೆಳ್ತಂಗಡಿ ಪಟ್ಟಣ ಪಂಚಾಯತ್ ಉಪಾಧ್ಯಕ್ಷ ಜಯಾನಂದ ಗೌಡ ಅಧ್ಯಕ್ಷತೆಯನ್ನು ವಹಿಸಿದ್ದರು. […]Read More
ಬೆಳ್ತಂಗಡಿ: ಬೆಳ್ಳಾರೆಗೆ ಆಗಮಿಸುತ್ತಿದ್ದ ಪ್ರವೀಣ್ ಪಾರ್ಥಿವ ಶರೀರದ ಮೆರವಣಿಗೆ ಉದ್ದಕ್ಕೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರು ಸಾಗುತ್ತಿದ್ದಾರೆ. ಇನ್ನೂ ಬೆಳ್ತಂಗಡಿ ಶಾಸಕರಲ್ಲಿ ಶವಯಾತ್ರೆಯ ವೇಳೆ ಕಾರ್ಯಕರ್ತರೋರ್ವರು ಈ ಸಾವಿಗೆ ನ್ಯಾಯ ದೊರಕಿಸಿ ಕೊಡಲು ನಿಮ್ಮಿಂದ ಮಾತ್ರ ಸಾಧ್ಯ. ಎಂದು ಕಾರಿನಲ್ಲಿ ಹೋಗುವಾಗ ಶಾಸಕರಲ್ಲಿ ಹೇಳುವ ವೀಡಿಯೋ ಇದೀಗ ವೈರಲ್ ಆಗಿದೆ.Read More
ಬೆಳ್ತಂಗಡಿ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ ಯಲ್ಲಿ ಜು.26 ರಂದು ಪ್ರಧಾನ್ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಡಿಯಲ್ಲಿ 1 ರಿಂದ 8 ನೇ ತರಗತಿ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದೊಂದಿಗೆ ಬೇಯಿಸಿದ ಮೊಟ್ಟೆಯನ್ನು ಶಾಸಕ ಹರೀಶ್ ಪೂಂಜರವರು ಮಕ್ಕಳಿಗೆ ವಿತರಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ- ಶಿಕ್ಷಕೇತರ ವೃಂದ ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.Read More
ಮೊಗ್ರು: ಜು24.ಕಳೆದ ಒಂದು ತಿಂಗಳಿನಿಂದ ಬೆಳ್ತಂಗಡಿ ತಾಲೂಕಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಭಾಗಶಃ ಹಾನಿಗೊಳಗಾದ ಬಂದಾರು ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮದ ಮುರ ಜನಾರ್ಧನ ಆಚಾರ್ಯ ಇವರ ಮನೆಗೆ ಹಾನಿ ಆಗಿದ್ದು ಶಾಸಕ ಹರೀಶ್ ಪೂಂಜರವರು ಜು.24 ರಂದು ಭೇಟಿ ನೀಡಿ ಪರಿಶೀಲನೆ ನಡೆಸಿ ಸಂತ್ರಸ್ತರಿಗೆ ವೈಯಕ್ತಿಕ ನೆರವನ್ನು ನೀಡಿ ಸರಕಾರದಿಂದ ಸಿಗುವ ಪರಿಹಾರವನ್ನು ಶೀಘ್ರದಲ್ಲಿ ಒದಗಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ಜಯಂತ ಕೋಟ್ಯಾನ್ ,ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ […]Read More