ಬೆಳ್ತಂಗಡಿ: ತಾಲೂಕು ಆರೋಗ್ಯ ಕೇಂದ್ರ ಬೆಳ್ತಂಗಡಿಯ ಡಯಾಲಿಸಿಸ್ ವಿಭಾಗದಲ್ಲಿ ಇನ್ವರ್ಟರ್ ಸಮಸ್ಯೆಯಿಂದ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ ಎಂಬ ದೂರಿನ ಹಿನ್ನೆಲೆ ಇಂದು ತಾಲೂಕು ಆಸ್ಪತ್ರೆಗೆ ತಹಶಿಲ್ದಾರ್ ಪೃಥ್ವಿ ಸಾನಿಕಂ ಹಾಗೂ ತಂಡ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ವೈದ್ಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪರಿಶೀಲನೆ ವೇಳೆ ಇನ್ವರ್ಟರ್ ಸಮಸ್ಯೆ ಕಂಡು ಬಂದಿದ್ದು ವೈದ್ಯರಾದ ಚಂದ್ರಕಾಂತ್ ಮತ್ತು ಸಿಬ್ಬಂದಿಗಳನ್ನು ಕರೆದು ತರಾಟೆ ಗೆ ತೆಗೆದುಕೊಂಡಿದ್ದಾರೆ. ತಕ್ಷಣ ಸಮಸ್ಯೆ ಬಗೆ ಹರಿಸುವಂತೆ ಸೂಚಿಸಿದ್ದಾರೆ.Read More