ಹೊಸ್ಮರ್ :ಕರ್ನಾಟಕ ಪಬ್ಲಿಕ್ ಸ್ಕೂಲ್ ಹೊಸ್ಮಾರ್ ಶಾಲಾ ಶತಮಾನೋತ್ಸವ ಆಚರಣಾ ಸಂಭ್ರಮದ ಮನವಿ ಪತ್ರ ಬಿಡುಗಡೆ ಕಾರ್ಯಕ್ರಮ ಹೈಸ್ಕೂಲ್ ಸಭಾಂಗಣದಲ್ಲಿ ಜರುಗಿತು. ಮನವಿ ಪತ್ರವನ್ನು ಶಾಸಕರು ಹಾಗೂ ಸಚಿವರಾದ ವಿ. ಸುನೀಲ್ ಕುಮಾರ್ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಅತಿಥಿ-ಗಣ್ಯರು ಮತ್ತು ಪಂಚಾಯತ್ಅಧ್ಯಕ್ಷರು, ಎಸ್ ಡಿ ಎಂ ಅಧ್ಯಕ್ಷರು, ಸದಸ್ಯರು ಮತ್ತು ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕಿ ವೃಂದ ಹಾಗೂ ಮಕ್ಕಳ ಪೋಷಕರು ಜೊತೆಗಿದ್ದರು.Read More
Tags :School
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಗಾಂಧಿ ಜಯಂತಿ ಆಚರಣೆಯನ್ನು ಅ.2 ರಂದು ಆಚರಿಸಲಾಯಿತು. ಜ್ಯೋತಿ ಬೆಳಗಿಸಿ ಶಾಸ್ತ್ರೀಯ ವರ ಹಾಗೂ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವುದರ ಮುಖಾಂತರ ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ.ವಿ.ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತದನಂತರ ಸರ್ವಧರ್ಮ ಪ್ರಾರ್ಥನೆ ನಡೆಯಿತು.ಶಾಲಾ ಶಿಕ್ಷಕರು ಭಜನೆಯನ್ನು ವಿದ್ಯಾರ್ಥಿಗಳಿಗೆ ಹೇಳಿಕೊಟ್ಟರು. ವಿದ್ಯಾರ್ಥಿಗಳು ದೇಶಭಕ್ತಿ ಗೀತೆಯನ್ನು ಹಾಗೂ ಶಾಂತಿ ಸಾಮರಸ್ಯವನ್ನು ಬಿಂಬಿಸುವ ಹಾಡನ್ನು ಹಾಡಿದರು. ಸಹ ಶಿಕ್ಷಕಿಯಾದ ಆಶಾ ಕುಮಾರಿ ವಿದ್ಯಾರ್ಥಿಗಳಿಗೆ ಮಹಾತ್ಮ ಗಾಂಧೀಜಿ ಹಾಗೂ […]Read More
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಡಿಸೆಂಬರ್ 21 ರಿಂದ 27ರವರೆಗೆ ಮೂಡಬಿದಿರೆಯಲ್ಲಿ ನಡೆಯಲಿರುವ ಸ್ಕೌಟ್ಸ್ ಗೈಡ್ಸ್ ನ ವಿಶ್ವ ಸಾಂಸ್ಕೃತಿಕೋತ್ಸವ ಜಾಂಬೂರಿಯ ಉತ್ಸವದಂಗವಾಗಿ ಮಾಹಿತಿ ಕಾರ್ಯಗಾರ ನಡೆಯಿತು. ಭಾರತ್ ಸ್ಕೌಟ್ಸ್ ಗೈಡ್ಸ್ ಸಂಘಟನಾ ಆಯುಕ್ತರಾದ ಶ್ರೀ ಭರತ್ ರಾಜ್. ಕೆ ಇವರು ಕಾರ್ಯಕ್ರಮದ ಆಗುಹೋಗುಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ವಿದ್ಯಾರ್ಥಿಗಳ ಜೊತೆಗೆ ಹೆತ್ತವರು ಇದ್ದಿದ್ದು ಈ ಕಾರ್ಯಕ್ರಮದ ವಿಶೇಷವಾಗಿತ್ತು. ತದನಂತರ ವಿದ್ಯಾರ್ಥಿಗಳು ತಮ್ಮ ನೃತ್ಯ ಹಾಡುಗಳ ಮೂಲಕ ಅಭ್ಯಾಗತರನ್ನು […]Read More
ಧರ್ಮಸ್ಥಳ: ಶ್ರೀ ಧ ಮ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಸೆ.14 ರಂದು ಸ್ಕೌಟ್ ಗೈಡ್ ಘಟಕದ ಉದ್ಘಾಟನಾ ಸಮಾರಂಭ ನೆರವೇರಿತು . ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭಾರತ ಸ್ಕೌಟ್ ಮತ್ತು ಗೈಡ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಇದರ ಕಾರ್ಯದರ್ಶಿಯಾದ ಪ್ರಮೀಳ ದೀಪ ಪ್ರಜ್ವಲಿಸಿ ಸ್ಕೌಟ್ಸ್ ಗೈಡ್ಸ್ ಘಟಕಕ್ಕೆ ಚಾಲನೆ ನೀಡಿದರು. ತದನಂತರ ವಿದ್ಯಾರ್ಥಿಗಳಿಗೆ ಸ್ಕೌಟ್ ಗೈಡಿನ ಮಹತ್ವವನ್ನ ತಿಳಿಹೇಳಿದರು. ವಿಶೇಷ ಆಹ್ವಾನಿತರಾಗಿ ಶಾಲಾ ಸಂಚಾಲಕರಾದ ಅನಂತಪದ್ಮನಾಭ ಭಟ್ ಆಗಮಿಸಿದ್ದು ಸ್ಕೌಟ್ ಗೈಡ್ನ ಮುಂದಿನ […]Read More
ಧರ್ಮಸ್ಥಳ: ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ವಿದ್ಯಾರ್ಥಿಗಳಿಂದ ಶಿಕ್ಷಕರ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಶಾಲೆಯ ಅಂಗಳದಲ್ಲಿ ಸರ್ವಪಲ್ಲಿ ರಾಧಾಕೃಷ್ಣನ್ ಅವರ ರಂಗೋಲಿ ರಾರಾಜಿಸಿ ಎಲ್ಲರನ್ನೂ ಸ್ವಾಗತಿಸುತ್ತಿತ್ತು.ಶಾಲೆಯ ಗೋಡೆಯ ತುಂಬೆಲ್ಲ ಶಿಕ್ಷಕರ ವಿವಿಧ ಹಾವ ಭಾವ ಭಂಗಿಯ ಫೋಟೋಗಳೇ ರಾರಾಜಿಸುತ್ತಿ ದ್ದವು. ಹಲವಾರು ನೆನಪುಗಳ ಮೆರವಣಿಗೆ ಅಲ್ಲಿ ಸಾಲುಗಟ್ಟಿ ನಿಂತಿತ್ತು. ಈ ಕಾರ್ಯಕ್ರಮದ ಪ್ರಾರಂಭ ಶಾಲೆಯ ಪ್ರಾರ್ಥನಾ ಸಮಯದಲ್ಲಿ ಎಲ್ಲಾ ಶಿಕ್ಷಕ ವೃಂದದ ಕುರಿತು ವಿದ್ಯಾರ್ಥಿಗಳೇ ರಚಿಸಿರುವ ಹಾಡಿನಿಂದ ಆಗಿತ್ತು. ಇಡೀ ಶಾಲೆಯನ್ನು ಅತ್ಯಂತ […]Read More
ಧರ್ಮಸ್ಥಳ: ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓಣಂ ನ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಹೂಗಳ ರಂಗೋಲಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಸ್ಪರ್ಧೆಯನ್ನು ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕವಾಗಿ ನಡೆಸಲಾಗಿತ್ತು. ಸುಮಾರು 25ಕ್ಕೂ ಹೆಚ್ಚು ತಂಡಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಬಣ್ಣ ಬಣ್ಣದ ಹೂಗಳ, ಎಲೆಗಳಿಂದ ಹಾಗೂ ಸುಂದರ ದೀಪಗಳಿಂದ ಅಲಂಕೃತವಾಗಿದ್ದ ಹೂವಿನ ರಂಗೋಲಿ ಪೂಕ್ಕಲಂ ಶಾಲೆಯ ಕಾರಿಡಾರಿನ ತುಂಬಾ ಅಲಂಕಾರಗೊಂಡಿತ್ತು. ಅತ್ಯಂತ ಸುಂದರವಾಗಿ ಮೂಡಿ ಬಂದ ಈ ಸ್ಪರ್ಧೆ ಮಕ್ಕಳ ಸೃಜನಶೀಲತೆಗೆ ಹಿಡಿದ ಕೈಗನ್ನಡಿಯಾಗಿತ್ತು. […]Read More
ಕುಂಟಾಲಪಲ್ಕೆ: ಸ. ಹಿ ಪ್ರಾ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ
ಬಂದಾರು: ಸ್ವಾತಂತ್ರ್ಯ ಭಾರತದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ‘ಹರ್ ಘರ್ ತಿರಂಗಾ’ ಅಭಿಯಾನದಡಿಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂಟಾಲಪಲ್ಕೆ ಯಲ್ಲಿ ಆ.10ರಂದು ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಮಾಚಾರ್ ಕಾರ್ಯಕ್ರಮದ ಸಂಪೂರ್ಣ ವಿವರವನ್ನು ಪೋಷಕರಿಗೆ ನೀಡಿದರು. ನಂತರ 1 ರಿಂದ 3 ನೇ ತರಗತಿ ಮಕ್ಕಳಿಗೆ ಸ್ವಾತಂತ್ರ್ಯ ಹೋರಾಟಗಾರರ ವೇಷಭೂಷಣ ಸ್ಪರ್ಧೆ ಮತ್ತು ಬಾವುಟದ ಚಿತ್ರ ಬಿಡಿಸುವ ಸ್ಪರ್ಧೆ, 4 ಮತ್ತು5 ನೇ ತರಗತಿ ಗೆ ಗೀತಗಾಯನ(ದೇಶಭಕ್ತಿ […]Read More
ಹುಣ್ಸೆಕಟ್ಟೆ: ಶ್ರೀ.ಕ್ಷೇ.ಧ.ಗ್ರಾ.ಯೋಜನೆ ,ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ವತಿಯಿಂದ ಸ್ವಚ್ಛತಾ ಕಾರ್ಯ
ಹುಣ್ಸೆಕಟ್ಟೆ: ಶ್ರೀ.ಕ್ಷೇ.ಧ.ಗ್ರಾ.ಯೋಜನೆ ,ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಹುಣ್ಸೆಕಟ್ಟೆ ಇದರ ವತಿಯಿಂದ ಆ.6 ರಂದು ಸ.ಕಿ.ಪ್ರಾ.ಶಾಲೆ ಹುಣ್ಸೆಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮವನ್ನು ಹುಣ್ಸೆಕಟ್ಟೆ ಒಕ್ಕೂಟ ಅಧ್ಯಕ್ಷರು ಹಾಗೂ ವಲಯ ಅಧ್ಯಕ್ಷರಾದ ಸೀತಾರಾಮ್ ಆರ್ ಇವರು ಉದ್ಘಾಟಿಸಿ,ಸ್ವಚ್ಚತೆ ಪ್ರತಿಯೊಬ್ಬರ ಆದ್ಯ ಕರ್ತವ್ಯ.ನಮ್ಮ ಜೀವನದಲ್ಲಿ ನಮ್ಮ ದೇಹದ ಸ್ವಚ್ಚತೆ ಎಷ್ಟೂ ಮುಖ್ಯವೋ ಅಷ್ಟೇ ನಮ್ಮ ಪರಿಸರದ ಸ್ವಚ್ಚತೆಯು ಮುಖ್ಯವಾಗಿದೆ. ಸಣ್ಣ ವಯಸ್ಸಿನಲ್ಲಿ ಮಕ್ಕಳಲ್ಲಿ ಸ್ವಚ್ಚತೆಯ ಬಗ್ಗೆ ಜಾಗೃತಿ ಮೂಡಬೇಕು ಎಂದೂ ಹೇಳಿ ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯರು […]Read More
ಏಮಾಜೆ ದ.ಕ.ಜಿ.ಪಂ.ಕಿ.ಪ್ರಾ.ಶಾಲೆಯ ಸಹಶಿಕ್ಷಕಿ ತ್ರಿವೇಣಿಯವರಿಗೆ ಗೌರವ ಡಾಕ್ಟರೇಟ್ ಪದವಿ:ಶಾಲಾ ಮಕ್ಕಳಿಂದ ಸ್ವಾಗತ
ಕಬಕ: ಬಂಟ್ವಾಳ ತಾಲೂಕಿನ ದ.ಕ.ಜಿ.ಪಂ.ಕಿ.ಪ್ರಾ.ಶಾಲೆ ಏಮಾಜೆ ಇಲ್ಲಿ ಸುಮಾರು 15 ವರ್ಷಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಹಾಗೂ ಸದಾ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ತ್ರಿವೇಣಿಯವರು ಗೌರವ ಡಾಕ್ಟರೇಟ್ ಪದವಿಯನ್ನು ತನ್ನ ಮುಡಿಗೇರಿಸಿಕೊಂಡಿದ್ದಾರೆ. ಇವರಿಗೆ ಇಂದು ಶಾಲಾ ಮಕ್ಕಳು ಹೂಗುಚ್ಛ ನೀಡಿ ಗೌರವ ಪೂರ್ವ ಕವಾಗಿ ಸ್ವಾಗತಿಸಿದರು. ಇವರಿಗೆ ಜು.24 ರಂದು ಗೋವಾದಲ್ಲಿ ರೆಜೆನ್ಸಿ ಇಂಟರ್ ನ್ಯಾಷನಲ್ ಥಿಯೋಲಾಜಿಕಲ್ ಯೂನಿವರ್ಸಿಟಿ ಒಂಟಾರಿಯೋ ಕೆನಡಾದ ವತಿಯಿಂದ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಇವರು ಬಂಟ್ವಾಳ ತಾಲೂಕಿನ […]Read More
ಬೆಳ್ತಂಗಡಿ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ ಯಲ್ಲಿ ಜು.26 ರಂದು ಪ್ರಧಾನ್ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಡಿಯಲ್ಲಿ 1 ರಿಂದ 8 ನೇ ತರಗತಿ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದೊಂದಿಗೆ ಬೇಯಿಸಿದ ಮೊಟ್ಟೆಯನ್ನು ಶಾಸಕ ಹರೀಶ್ ಪೂಂಜರವರು ಮಕ್ಕಳಿಗೆ ವಿತರಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ- ಶಿಕ್ಷಕೇತರ ವೃಂದ ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.Read More