ಹೊಸದಿಲ್ಲಿ: ಬಿಜೆಪಿಯ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಭಾರತದ ಉಪರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸಬಹುದು ಎಂಬ ಊಹಾಪೋಹ ಕೇಳಿ ಬಂದ ನಡುವೆ ಇಂದು ತಮ್ಮ ಕೇಂದ್ರ ಸಚಿವ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ್ದಾರೆ. ನಖ್ವಿ ಅವರ ರಾಜ್ಯಸಭಾ ಅವಧಿ ನಾಳೆ ಕೊನೆಗೊಳ್ಳಲಿದೆ. ಇಂದು ಬೆಳಗ್ಗೆ ನಖ್ವಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ.Read More