ಬೆಳ್ತಂಗಡಿ: ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಮತ್ತು ಶಾರದಾ ಪದವಿ ಪೂರ್ವ ಕಾಲೇಜು ಮಂಗಳೂರು ಇವರ ಆತಿಥ್ಯದಲ್ಲಿ ನಡೆದ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸಿದ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದು ಕೊಂಡಿದೆ ಮತ್ತು ವಾಣಿ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಗೌತಮ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ತಂಡವನ್ನು ತರಬೇತಿ ಗೊಳಿಸಿದ ಕಾಲೇಜಿನ ಕ್ರೀಡಾ ಸಂಯೋಜಕ ನಂದಕುಮಾರ್ ನ್ನು ಮತ್ತು ರಾಜ್ಯಮಟ್ಟಕ್ಕೆ […]Read More
Tags :STUDENT
ಲಾಯಿಲ: ಪ್ರಸನ್ನ ಕಾಲೇಜಿನ ವಿದ್ಯಾರ್ಥಿ ರಕ್ತದೊತ್ತಡದಿಂದ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿರುವ ಘಟನೆ ನಡೆದಿದೆ. ಈತ ಬಾರ್ಯ ಗ್ರಾಮದ ಗಿರಿಗುಡ್ಡೆ ಸುಶೀಲ ಎಂಬವರ ಮಗ ಸುಮಂತ್ ಮಡಿವಾಳ (20). ಎಂದು ಗುರುತಿಸಲಾಗಿದೆ. ಒಂದು ವಾರದ ಹಿಂದೆ ಕಾಲೇಜಿನಲ್ಲಿ ಬಿದ್ದು ಗಾಯಗೊಂಡಿದ್ದ ವಿದ್ಯಾರ್ಥಿ ಯನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ವಿದ್ಯಾರ್ಥಿ ಬೆಳ್ತಂಗಡಿಯ ಪ್ರಸನ್ನ […]Read More
ಲಂಡನ್: ಋತುಸ್ರಾವಕ್ಕೆ ಸಂಬಂಧಿಸಿದ ಹೊಟ್ಟೆನೋವು ಎಂದು ಶೌಚಾಲಯಕ್ಕೆ ತೆರಳಿದ್ದ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬಳು, ಅಲ್ಲಿಯೇ ಮಗುವಿಗೆ ಜನ್ಮನೀಡಿದ ಘಟನೆ ಬ್ರಿಟನ್‌ನಲ್ಲಿ ನಡೆದಿದೆ. ತಾನು ಗರ್ಭಿಣಿಯಾಗಿರುವುದೇ ಗೊತ್ತಿಲ್ಲದ 20 ವರ್ಷದ ವಿದ್ಯಾರ್ಥಿನಿ, ಋತುಸ್ರಾವದ ಕಾರಣದಿಂದ ತನಗೆ ಹೊಟ್ಟೆ ನೀವು ಬಂದಿದೆ ಎಂದು ಭಾವಿಸಿ ಶೌಚಾಲಯಕ್ಕೆ ತೆರಳಿದ್ದಳು. ಆದರೆ, ಅಲ್ಲಿ ಮಗು ಜನಿಸಿರುವುದನ್ನು ಕಂಡು ಆಘಾತಕ್ಕೆ ಒಳಗಾಗಿದ್ದಾಳೆ. ಬ್ರಿಸ್ಟಲ್‌ನಲ್ಲಿ ಇತಿಹಾಸ ಮತ್ತು ರಾಜಕೀಯ ವಿದ್ಯಾರ್ಥಿನಿಯಾಗಿರುವ ಜೆಸ್ ಡೇವಿಸ್, ಸೌಥಂಪ್ಟನ್ ವಿಶ್ವವಿದ್ಯಾಲಯದಲ್ಲಿ ಎರಡನೇ ವರ್ಷ ಪದವಿ ಓದುತ್ತಿದ್ದಾಳೆ. ಆಕೆಯಲ್ಲಿ ಗರ್ಭಧಾರಣೆಯ ಯಾವುದೇ ಲಕ್ಷಣ […]Read More