ಚಿಕ್ಕಮಗಳೂರು: ಪುಟ್ಟ ಬಾಲಕಿಯೊಬ್ಬಳು ಕಾಲು ಕೆಸರಾಗಿದೆ ಎಂದು ಕಾಲು ತೊಳೆದುಕೊಳ್ಳಲು ಹಳ್ಳಕ್ಕೆ ಇಳಿದಿದ್ದು, ನೀರಿನ ರಭಸಕ್ಕೆ ಹಳ್ಳದಲ್ಲಿ ಕೊಚ್ಚಿ ಹೋದ ಘಟನೆ ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಗ್ರಾಮದಲ್ಲಿ ನಡೆದಿದೆ. ಹಳ್ಳದಲ್ಲಿ ಕೊಚ್ಚಿ ಹೋದ ಬಾಲಕಿ ಸುಪ್ರೀತಾ ಎಂದು ಗುರುತಿಸಲಾಗಿದೆ. ಸುಪ್ರಿತಾ ತನ್ನ ಅಣ್ಣನ ಜೊತೆ ಶಾಲೆ ಮುಗಿಸಿಕೊಂಡು ಮನೆಗೆ ಬರುತ್ತಿದ್ದ ಸಂದರ್ಭದಲ್ಲಿ ಕಾಲು ಕೆಸರಾಯಿತು ಎಂದು ಅಣ್ಣ ತಂಗಿ ಇಬ್ಬರು ಹಳ್ಳದಲ್ಲಿ ಕಾಲು ತೊಳೆದುಕೊಳ್ಳಲು ಹೋಗಿದ್ದರು ಈ ವೇಳೆ ತಂಗಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.Read More