ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ ಸಿ ಸುಧಾಕರ್ ಅವರನ್ನು ಶಾಸಕ ಹರೀಶ್ ಪೂಂಜರವರು ಭೇಟಿಯಾಗಿ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ಪ್ರಥಮ ದರ್ಜೆ ಕಾಲೇಜನ್ನು ಆರಂಭಿಸಲು ಮನವಿ ಸಲ್ಲಿಸಿದರು. ಪುಂಜಾಲಕಟ್ಟೆ ಹಾಗೂ ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಅನುದಾನವನ್ನು ಒದಗಿಸುವಂತೆ ಮನವಿ ಮಾಡಿದರು.Read More
Tags :venoor
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವೇಣೂರು ವೇಣೂರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘಕ್ಕೆ ಜಮೀನು ಮಂಜೂರು ಮಾಡಿದ ಕರ್ನಾಟಕ ಸರ್ಕಾರಕ್ಕೆ ಮತ್ತು ಈ ಜಮೀನು ಮಂಜೂರಾತಿಗಾಗಿ ಸರ್ಕಾರದ ಅಂತಿಮ ಅನುಮೋದನೆ ಗಾಗಿ ಅವಿರತ ಪ್ರಯತ್ನ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ವೇಣೂರುಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದ ಅಧ್ಯಕ್ಷರು ಪದಾಧಿಕಾರಿಗಳು, ನಿರ್ದೇಶಕರು ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಅಧ್ಯಕ್ಷರು, ಬೆಳ್ತಂಗಡಿ ಶ್ರೀ ನಾರಾಯಣ […]Read More
ಬೆಳ್ತಂಗಡಿ; ವೇಣೂರಿನ ಬಾಹುಬಲಿ ಸ್ವಾಮಿಗೆ ನಡೆದ ಈ ಶತಮಾನದ 3 ನೇ ಮಹಾ ಮಸ್ತಕಾಭಿಷೇಕ ಮಹೋತ್ಸವದಲ್ಲಿ ಹೂವಿನ ಅಲಂಕಾರದಲ್ಲಿ ಮಾಸ್ಟರ್ ಫ್ಲವರ್ಸ್ ಮಂಗಳೂರು ಇದರ ಮಾಲಿಕ ಫಕೀರಬ್ಬ ಮಾಸ್ಟರ್ ಅವರು ವಿಶೇಷ ಗಮನಸೆಳೆದಿದ್ದಾರೆ. ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದವರಾದ ಫಕೀರಬ್ಬ ಮಾಸ್ಟರ್ ಅವರು ಮಂಗಳೂರಿನ ಪ್ರಖ್ಯಾತ ಮಾಸ್ಟರ್ ಫ್ಲವರ್ಸ್ ನ ಮಾಲಕರಾಗಿದ್ದು, ವೇಣೂರು ಮಹಾ ಮಸ್ತಕಾಭಿಷೇಕದ ಎಲ್ಲಾ ದಿನಗಳಲ್ಲೂ ಹೂವಿನ ಅಲಂಕಾರದ ವ್ಯವಸ್ಥೆಯನ್ನು ವಹಿಸಿಕೊಂಡಿದ್ದರು. ಆ ಮೂಲಕ ಅವರ ತಂಡ ಮಸ್ತಕಾಭಿಷೇಕದ ಎಲ್ಲಾ 8 ದಿನಗಳಲ್ಲಿ […]Read More
ಬೆಳ್ತಂಗಡಿ: ವೇಣೂರು ಹಿದಾಯಾತುಲ್ ಇಸ್ಲಾಂ ಮದ್ರಸ ಇಲ್ಲಿನ ಮುಖ್ಯ ಅಧ್ಯಾಪಕರಾಗಿದ್ದ ಕಾರ್ಕಳ ಹೊಸ್ಮಾರು ನಿವಾಸಿ ಧರ್ಮಗುರು ಅಬ್ದುಲ್ ರಹಿಮಾನ್ ಮುಸ್ಲಿಯಾರ್ (ಅದ್ದು ಉಸ್ತಾದ್) (43) ಅವರು ಕರ್ತವ್ಯದಲ್ಲಿರುವಂತೆಯೇ ವಾಂತಿ ಮಾಡಿಕೊಂಡು ತೀವ್ರ ಅಸ್ವಸ್ಥತಗೊಂಡು ಅ.15 ರಂದು ಕೊನೆಯುಸಿರೆಳೆದಿದ್ದಾರೆ. ಸುನ್ನೀ ವಿದ್ಯಾಭ್ಯಾಸ ಬೋರ್ಡ್ ಮದರಸಗಳಲ್ಲಿ ಇಂದು ಅಂತಿಮ ಪರೀಕ್ಷೆ ನಡೆದಿದ್ದು, ತನ್ನ ಕರ್ತವ್ಯ ಮುಗಿಸಿ ಬೆಳಗ್ಗಿನ ಉಪಹಾರ ಮಾಡುತ್ತಿದ್ದಾಗ ತಲೆತಿರುಗಿದಂತಾಗಿ ವಾಂತಿ ಮಾಡಿದ್ದರು.ತಕ್ಷಣ ಅವರನ್ನು ಸ್ಥಳೀಯ ಕ್ಲಿನಿಕ್‌ನಲ್ಲಿ, ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಗುರುವಾಯನಕೆರೆಯ ಖಾಸಗಿ […]Read More
ವೇಣೂರು: ಪರಮಪೂಜ್ಯ ಯುಗಳ ಮುನಿಶ್ರೀಗಳಾದ 108 ಅಮೋಘಕೀರ್ತಿ ಮುನಿಮಹಾರಾಜರ ಹಾಗೂ 106 ಅಮರಕೀರ್ತಿ ಮುನಿಮಹಾರಾಜರ ಶುಭಾಶೀರ್ವಾದಗಳೊಂದಿಗೆ, ಹಾಗೂ ಮೂಡಬಿದಿರೆ ಶ್ರೀ ಜೈನ ಮಠದ ಪರಮಪೂಜ್ಯ ಭಾರತಭೂಷಣ ಸ್ವಸ್ತಿಶ್ರೀ ಡಾ. ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರ ಪಾವನ ಸಾನಿಧ್ಯದಲ್ಲಿ ಮತ್ತು ಕನಕಗಿರಿ ಶ್ರೀ ಜೈನ ಮಠದ ಪರಮಪೂಜ್ಯ ಸ್ವಸ್ತಿಶ್ರೀ ಭುವನಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಹಾಗೂ ರಾಜರ್ಷಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತಯಲ್ಲಿ ಫೆಬ್ರವರಿ 2024 ರಲ್ಲಿ ಜರುಗಲಿರುವ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ […]Read More
ವೇಣೂರು: ವೈದ್ಯರ ನಿರ್ಲಕ್ಷ್ಯಕ್ಕೆ ಮೆದುಳು ನಿಷ್ಕ್ರಿಯಗೊಂಡು ಗರ್ಭಿಣಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಆಸ್ಪತ್ರೆಯಲ್ಲಿ ನಡೆದಿದೆ. ಸಾವನ್ನಪ್ಪಿರುವ ಗರ್ಭಿಣಿ ವೇಣೂರಿನ ಶಿಲ್ಪಾ ಎಂದು ತಿಳಿದುಬಂದಿದೆ. ಈಕೆ ತನ್ನ ಎರಡನೇ ಮಗುವಿನ ಹೆರಿಗೆಗಾಗಿ ಜುಲೈ.2 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರ ಚಿಕಿತ್ಸೆಯ ಮೂಲಕ ಹೆಣ್ಣುಮಗುವನ್ನು ಹೊರತೆಗೆದರೂ ಗರ್ಭಕೋಶದಲ್ಲಿ ಸಮಸ್ಯೆ ಇದೆ ಎಂದು ಹೇಳಿ ಬಳಿಕ ಅದರ ನಿವಾರಣೆಯ ಸಂದರ್ಭ ರಕ್ತಸ್ರಾವವಾಗಿದೆ ಎನ್ನಲಾಗಿದೆ. ರಕ್ತದೊತ್ತಡದ ಏರಿಳಿತದಿಂದ ಸಮಸ್ಯೆ ಉಲ್ಬಣಗೊಂಡು ಮೆದುಳು ನಿಷ್ಕ್ರಿಯಗೊಂಡು ಕೋಮಾಕ್ಕೆ ತಲುಪಿದ್ದರು ಎಂದು ಆರೋಪಿಸಲಾಗಿದೆ.Read More
ವೇಣೂರು: ವೇಣೂರು ಗ್ರಾ.ಪಂ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ನೇಮಯ್ಯ ಕುಲಾಲ್ ಅವರ ಅಧ್ಯಕ್ಷತೆಯಲ್ಲಿ ವೇಣೂರು ನೂತನ ಬಸ್ ತಂಗುದಾಣದ ಸಭಾಭವನದಲ್ಲಿ ಜು.1 ರಂದು ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಪಶು ವೈದ್ಯಕೀಯ ಇಲಾಖೆಯ ಸಹಾಯಕ ನಿರ್ದೇಶಕ ಮಂಜಯ್ಯ ನಾಯ್ಕ್ ಗ್ರಾಮಸಭೆಯನ್ನು ಮುನ್ನಡೆಸಿದರು. ವೇಣೂರು ಪೇಟೆಯ ಎಲ್ಲಾ ಅಂಗಡಿಗಳಿಗೆ ಗ್ರಾಮಸಭೆಯ ನೋಟೀಸ್ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದರು. ವಿಶೇಷವಾಗಿ ಬಜಿರೆ ಶಾಲೆಯ 8ನೇ ತರಗತಿ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕಲಾಪ ವೀಕ್ಷಣೆ […]Read More
ವೇಣೂರು: ವೇಣೂರು ಠಾಣಾ ವ್ಯಾಪ್ತಿಯ ಮೂಡುಕೋಡಿ ಎಂಬಲ್ಲಿ ವೃದ್ದರೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಡುಕೋಡಿ ಹುರಾಬೆ ಮನೆ ನಿವಾಸಿ ಪೇದ್ರು ಯಾನೆ ಪಿಶಿರ(70) ಆತ್ಮಹತ್ಯೆ ಮಾಡಿಕೊಂಡವರು.Read More
ವೇಣೂರು: ಇನೋವ ಕಾರು ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಜ.1 ರಂದು ವೇಣೂರು ಗೋಳಿಯಂಗಡಿ ಬಳಿ ನಡೆದಿದೆ. ಕಾರಿನಲ್ಲಿ ಅಬ್ದುಲ್ ಹಮೀದ್ ಎಂಬವರ ದಾಖಲೆ ದೊರೆತಿದ್ದು ಮೃತರ ಮಾಹಿತಿ ಲಭ್ಯವಾಗಿಲ್ಲRead More